ಕರಾವಳಿ
ಉಡುಪಿ-ದಕ್ಷಿಣ ಜಿಲ್ಲೆಯಲ್ಲಿ ಇಂದು ರಂಜಾನ್ ಆಚರಣೆ: ಸರಕಾರಿ ರಜೆ ಘೋಷಣೆ

Views: 56
ಮಂಗಳೂರು: ದೇಶದೆಲ್ಲೆಡೆ ನಾಳೆ (ಗುರುವಾರ) ಈದ್ ಉಲ್ ಫಿತರ್ ಆಚರಣೆ ನಡೆಯಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್ ಆಚರಿಸಲಾಗುತ್ತಿದೆ.ಮಂಗಳವಾರ ಚಂದ್ರ ದರ್ಶನವಾದ ಮಾಹಿತಿ ಆಧರಿಸಿ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್ ಅವರು ಬುಧವಾರ(ಇಂದು) ಈದ್ ಉಲ್ ಫಿತರ್ ಆಚರಿಸುವುದು ಎಂದು ಘೋಷಿಸಿದ್ದರು. ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್ ಆಚರಣೆ ನಡೆಯುತ್ತಿದೆ.
ರಂಜಾನ್ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸರಕಾರಿ ರಜೆ ಘೋಷಿಸಲಾಗಿದೆ. ನಿಗದಿತ ಪರೀಕ್ಷೆಗಳು ಬಿಟ್ಟು, ಉಳಿದಂತೆ ಸರಕಾರಿ ಕಚೇರಿಗಳು ಮುಚ್ಚಿರುತ್ತವೆ. ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ಮನವಿಯಂತೆ ಸರಕಾರದ ಅಧೀನ ಕಾರ್ಯದರ್ಶಿ ವಿಜಯ ಕುಮಾರ್ ಎಚ್.ಬಿ. ಆದೇಶ ಹೊರಡಿಸಿದ್ದಾರೆ.