ರಾಜಕೀಯ

400 ಕ್ಕೂ ಹೆಚ್ಚು ಮುಖಂಡರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡ ಡಿಕೆಶಿ, ದಳಪತಿಗಳಿಗೆ ಬಿಗ್‌ ಶಾಕ್‌.‌‌.!

Views: 92

ಬೆಂಗಳೂರು:ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವ ಕಂಡು ಸರ್ಕಾರ ರಚಿಸಿರುವ ಕಾಂಗ್ರೆಸ್‌ ಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಕಾಂಗ್ರೆಸ್‌ ಠಕ್ಕರ್‌ ಕೊಡಲು ಹಲವು ತಂತ್ರಗಾರಿಕೆಯನ್ನು ನಡೆಸಿದ್ರೆ, ಇತ್ತ ಸದ್ದಿಲ್ಲದೇ ಡಿ ಕೆ ಶಿವಕುಮಾರ್‌ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ, ಮತ್ತಿತರರ ನಾಯಕರು ಸೇರಿದಂತೆ ಬರೋಬ್ಬರಿ 400 ಕ್ಕೂ ಮುಖಂಡರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡಿದ್ದು, ದಳಪತಿಗಳಿ ಬಿಗ್‌ ಶಾಕ್‌ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ, ಮತ್ತಿತರರ ನಾಯಕರು ಹಾಗೂ ಕಾರ್ಯಕರ್ತರನ್ನು ಗುರುವಾರ ರಾತ್ರಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಶಿವಕುಮಾರ್ ಅವರು, ಕುಮಾರಸ್ವಾಮಿ ಹಾಗು ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕೆ ಇಳಿಸಿ, ಜೆಡಿಎಸ್ ಪಕ್ಷವನ್ನು ಹೇಗೆ ಕಟ್ಟುತ್ತಾರೆ ಎಂದು ಲೇವಡಿ ಮಾಡಿದರು.

ದೇವೇಗೌಡರು ಪಕ್ಷದ ಅಧಿಕಾರವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟ ಪರಿಣಾಮ ಆ ಪಕ್ಷ ಈ ಸ್ಥಿತಿ ತಲುಪಿದೆ. ಈಗ ತಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿದವರನ್ನೇ ಕರೆದುಕೊಂಡು ಒಕ್ಕಲಿಗರ ಮಠಕ್ಕೆ ಹೋಗಿದ್ದಾರೆ. ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ತಮ್ಮ ಪಕ್ಷದ ಕಾರ್ಯಕರ್ತರಿಗೆ ಒಂದು ಸಣ್ಣ ಅಧಿಕಾರವನ್ನಾದರೂ ಕೊಟ್ಟರಾ? ಅಧಿಕಾರ ಇದ್ದಾಗಲೇ ಏನು ಮಾಡಲಿಲ್ಲ. ಕಾರ್ಯಕರ್ತರು ಇಲ್ಲದೆ ಯಾವ ಪಕ್ಷ ಇರಲು ಸಾಧ್ಯ? ಎಂದು ಪ್ರಶ್ನಿಸಿದರು

ಕಳೆದ ಒಂದು ತಿಂಗಳಲ್ಲಿ ಸುಮಾರು ಹತ್ತು ಸಾವಿರ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದರು.

Related Articles

Back to top button
error: Content is protected !!