ಜನಮನ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ನಡೆಸಿ ತಲೆ ಮರೆಸಿಕೊಂಡಿದ್ದ ಆರೋಪಿಗಳ ಸೆರೆ

Views: 184

ಬೆಂಗಳೂರು, ಬಾಂಬರ್ ಹುಡುಕಾಟದಲ್ಲಿದ್ದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡಕ್ಕೆ ಇಬ್ಬರು ಬಾಂಬರ್ ಜೊತೆಗೆ ಸೂತ್ರಧಾರ ಕೂಡ ಸೆರೆಸಿಕ್ಕಿದ್ದು,ಕಾರ್ಯಾಚರಣೆ ಯಶಸ್ವಿಯಾಗಿದೆ.

ಇವರಿಬ್ಬರು ಬೆಂಗಳೂರಿನಲ್ಲಿ ಸ್ಫೋಟದ ಬಳಿಕ ಬೇರೆ ಬೇರೆ ಮಾರ್ಗವಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಕಡೆ ಹೋಗಿ ತಲೆಮರೆಸಿಕೊಂಡು, ಕೋಲ್ಕತ್ತಾದಲ್ಲಿ ಮನೆಯೊಂದರಲ್ಲಿ ವಾಸವಿದ್ದ ಮಾಹಿತಿಯನ್ನು ಅಲ್ಲಿನ ಸ್ಥಳೀಯ ಪೊಲೀಸರು ನೀಡಿದ್ದಾರೆ. ಈ ಮಾಹಿತಿಯನ್ವಯ ಎನ್‌ಐಎ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ

ಪಾತಕಿ ಮುಸಾವೀರ್ ಶಾಜೀಬ್ ಹುಸೇನ್ ಹಾಗೂ ಅಬ್ದುಲ್ ಮತೀನ್ ತಾಹಾ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ತಲೆಮರೆಸಿಕೊಂಡು ಓಡಾಡುತ್ತಿದ್ದ ಮಾಹಿತಿಯನ್ನು ಆಧರಿಸಿ. ಕರ್ನಾಟಕ, ಪಶ್ಚಿಮ ಬಂಗಾಳ, ಕೇರಳ, ತೆಲಂಗಾಣ ಪ್ರದೇಶಗಳಲ್ಲಿ ಜಾಲಾಡಿದ್ದ ಎನ್‌ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವನ್ನು ಪಡೆದುಕೊಂಡಿದ್ದರು.

ಇವರ ಫೋಟೊಗಳನ್ನು ಹಂಚಿಕೊಂಡು ಎಲ್ಲ ಕಡೆ ಶೋಧ ಕಾರ್ಯ ನಡೆಸಲಾಗಿತ್ತು. ಕೊನೆಗೆ ಕೋಲ್ಕತ್ತದಲ್ಲಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದರು ಎಂಬ ಮಾಹಿತಿ ಸ್ಥಳೀಯ ಪೊಲೀಸರಿಗೆ ಲಭ್ಯವಾಗಿದೆ. ಅವರಿಂದ ಮಾಹಿತಿ ಪಡೆದ ಎನ್‌ಐಎ ಅಧಿಕಾರಿಗಳು ಬೆಳಗಿನ ದಾಳಿ ನಡೆಸಿ ಬಂಧಿಸಿದ್ದಾರೆ.

ಬಾಂಬ್ ಇಟ್ಟಿದ್ದ ಪಾತಕಿ ಉಗ್ರ ಮುಸಾವೀರ್ ಶಾಜೀಬ್ ಹುಸೇನ್‌ನನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ. ಬಾಂಬ್ ಇಟ್ಟಿದ್ದ ಉಗ್ರನ ಬೆನ್ನು ಹತ್ತಿ ತಮಿಳುನಾಡು, ಒಡಿಶಾ, ಅಸ್ಸಾಂ, ಪಶ್ಚಿಮ ಬಂಗಾಳ ಮುಂತಾದ ರಾಜ್ಯಗಳಲ್ಲಿ ಓಡಾಡಿದ್ದ ಎನ್‌ಐಎ, ಅವರ ಇರುವಿಕೆಯ ಸ್ಥಳಗಳನ್ನು ಪತ್ತೆ ಹಚ್ಚಿ ಹೋಗುವುದರೊಳಗೆ ಅವರು ಅಲ್ಲಿಂದ ಪರಾರಿಯಾಗುತ್ತಿದ್ದರು. ಆದರೆ, ಇದಕ್ಕೂ ಮೊದಲೇ ಬಂಧಿಸಲಾಗಿದ್ದ ಶಾಜೀನ್ ಹುಸೇನ್‌ನಿಂದ ಕೆಲವೊಂದಿಷ್ಟು ಮಾಹಿತಿಯನ್ನು ಕಲೆ ಹಾಕಲಾಗಿತ್ತು. ಅದು ಸಹ ಕಾರ್ಯಾಚರಣೆಗೆ ಸಹಾಯಕ್ಕೆ ಬಂದಿದೆ ಎನ್ನಲಾಗಿದೆ.

ಮುಸಾವೀರ್ ಹುಸೇನ್ ಶಾಜಿಬ್‌ನೇ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಇಐಡಿ) ಸ್ಫೋಟಿಸಿದ್ದು” ಎಂಬುದಾಗಿ ಎನ್‌ಐಎ ಪ್ರಕಟಣೆ ತಿಳಿಸಿತ್ತು. “ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವನಾದ ಮುಸಾವೀರ್ ಹುಸೇನ್ ಶಾಜಿಬ್ ಬಾಂಬಿಟ್ಟವನು ಎಂದು ತನಿಖೆಯಿಂದ ಗೊತ್ತಾಗಿದೆ. ಅಬ್ದುಲ್ ಮಥೀನ್ ತಾಹಾ ಎಂಬುವವನು ಕೂಡ ಪ್ರಕರಣದಲ್ಲಿ ಪ್ರಮುಖ ಪಿತೂರಿದಾರನಾಗಿದ್ದಾನೆ. ಮುಜಾಮಿಲ್ ಷರೀಫ್‌ನು ಬಾಂಬ್ ತಯಾರಿಸಲು ಇವರಿಗೆ ಹಲವು ವಸ್ತುಗಳನ್ನು ಪೂರೈಕೆ ಮಾಡಿದ್ದಾನೆ ಎಂಬುದು ತನಿಖೆಯ ವೇಳೆ ಬಹಿರಂಗವಾಗಿದೆ. ಮುಜಾಮಿಲ್ ಷರೀಫ್‌ನನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ” ಎಂದು ಎನ್‌ಐಎ ಪ್ರಕಟಣೆ ತಿಳಿಸಿತ್ತು.

ಮಾರ್ಚ್ 1ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು. ಮತ್ತೊಂದೆಡೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಮೊಬೈಲ್ ಅಂಗಡಿಯೊಂದಕ್ಕೆ ಕೆಲ ದಿನಗಳ ಹಿಂದೆ ಭೇಟಿ ನೀಡಿದ್ದ ಎನ್‌ಐಎ ಅಧಿಕಾರಿಗಳು, ಹಿಂದು ಕಾರ್ಯಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

Related Articles

Back to top button
error: Content is protected !!