ರಾಜಕೀಯ

ಶಿವಮೊಗ್ಗ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

Views: 75

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಉಪಸ್ಥಿತರಿದ್ದರು. ಒಂದೇ ದಿನ ಎರಡನೇ ಬಾರಿಗೆ ಈಶ್ವರಪ್ಪನವರಿಂದ ಉಮೇದುವಾರಿಕೆ ಸಲ್ಲಿಕೆಯಾಗಿದೆ. ಇಂದು ಬೆಳಗ್ಗೆ ಈಶ್ವರಪ್ಪ  ಹಾಗೂ ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಅವರು ಈಶ್ವರಪ್ಪ ಪರವಾಗಿ ನಾಮಪತ್ರ ಸಲ್ಲಿಸಿದ್ದರು. ಇದಕ್ಕೂ ಮುನ್ನ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕುಟುಂಬದೊಂದಿಗೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ನಗರದ ಮಾರಿಕಾಂಬ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದರು.

Related Articles

Back to top button
error: Content is protected !!