ನಾಳೆಯಿಂದ ಏ.13 ರಿಂದ ಏ.18 ರವರೆಗೆ ಮನೆಯಿಂದಲೇ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಮತದಾನ

Views: 53
85 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 13 ರಿಂದ ಏಪ್ರಿಲ್ 18 ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವೀಡಿಯೋಗ್ರಫಿ ಮೂಲಕ ಸೆರೆಹಿಡಿಯಲಾಗುತ್ತದೆ.
ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಯೊಂದಿಗೆ ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ. ಮುಂಚಿತವಾಗಿ ಮಾಹಿತಿ ನೀಡಿದ ಬಳಿಕವೇ ಮತಗಟ್ಟೆ ಸಿಬ್ಬಂದಿ ಭೇಟಿ ನೀಡುವರು.ಮೊದಲ ಬಾರಿ ಮತದಾರರು ಮನೆಯಲ್ಲಿರದಿದ್ದರೆ,ಎರಡನೇ ಬಾರಿ ಹೋಗುತ್ತಾರೆ.ಆ ಬಳಿಕ ಮತದಾನಕ್ಕೆ ಅವಕಾಶವಿರುವುದಿಲ್ಲ.
ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ.







