ಇತರೆ

ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ: ಬಾಲಕ ಸೇರಿ ನಾಲ್ವರ ಸಾವು

Views: 63

ವಿಜಯಪುರ, ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಬಾಲಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾನಪ್ಪಿದ್ದಾರೆ.ಕಾರು ಹಾಗೂ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಿಂದಾಗಿ ಈ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ವಿಜಯಪುರ ಮೂಲದ ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಸುನಿಲಾಲ್ ಪತ್ತಾರ (52 ), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ಅರ್ಜುನಸಿಂಗ್ ರಜಪೂತ

(12) ಮೃತ ದುರ್ದೈವಿಗಳು.ವಿಜಯಪುರದಿಂದ ಜಮಖಂಡಿಯ ದೇವಸ್ಥಾನಕ್ಕೆ ಕಾರಿನಲ್ಲಿ ನತದೃಷ್ಟರು ತೆರಳುತ್ತಿದ್ದರು.

ಜಮಖಂಡಿಯಿಂದ ಸಿಮೆಂಟ್ ಹೇರಿದ್ದ ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿ ಸಂಭವಿಸಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.

ಕಾರು ನಜ್ಜುಗುಜ್ಜಾಗಿದೆ. ಚಾಲಕ ಕಾರಿನಲ್ಲಿ ಪ್ರಾಣ ಬಿಟ್ಟಿದ್ದಾರೆ. ಹಿಂಬದಿ ಕುಳಿತ ಇತರರು ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡು ಮೃತ ಪಟ್ಟು ಕೆಲವರ ಶವಗಳು ಕಾರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದರೆ ಇನ್ನೂ ಕೆಲವರ ಮೃತ ದೇಹಗಳು ಕಾರಿನಿಂದ ಹೊರಗಡೆ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ರಕ್ತಸಿಕ್ತವಾಗಿ ಬಿದ್ದಿದ್ದವು. ಸುದ್ದಿ ತಿಳಿಯುತ್ತಿದ್ದಂತೆಯೇ ಬಬಲೇಶ್ವರ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಶವಗಳನ್ನು ಹೊರ ತೆಗೆಯಲು ಹರ ಸಾಹಸಪಟ್ಟರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಇತರ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Back to top button
error: Content is protected !!