ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ

Views: 69
ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಒಳನಾಡಿನ ಭಾಗದಲ್ಲಿ ಕೆಲವೊಮ್ಮೆ ಗಾಳಿ ವೇಗವು ರಭಸವಾಗಿ ಬೀಸಲಿದೆ. ರಾಜ್ಯಾದ್ಯಂತ ಕೆಲವಡೆ ಗುಡುಗು ಮತ್ತು ಮಿಂಚಿನೊಂದಿಗೆ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ಶನಿವಾರ ಉತ್ತಮ ಮಳೆ
ಪಶ್ಚಿಮ ಘಟ್ಟದ ತಪ್ಪಲು ಸೇರಿದಂತೆ ಕರಾವಳಿ ಭಾಗದಲ್ಲಿ ಶನಿವಾರ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಕುಂದಾಪುರದ ಕೋಟೇಶ್ವರ ಕಾಳಾವರ ಬಿದ್ಕಲ್ಕಟ್ಟೆ, ಮೊಳಹಳ್ಳಿ, ಅಮಾಸೆಬೈಲು, ಸುಬ್ರಹ್ಮಣ್ಯ, ಹೆಬ್ರಿ, ಬೆಳ್ತಂಗಡಿ ಪರಿಸರದಲ್ಲಿ ಸಂಜೆ ಆರು ಗಂಟೆಯಿಂದ ಸುಮಾರು ಒಂದು ಗಂಟೆಗಳ ಕಾಲ ಮಳೆಯಾಗಿದೆ
ಏಪ್ರಿಲ್ 15 ರಿಂದ 17ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಏಪ್ರಿಲ್ 17ರವರೆಗೆ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏಪ್ರಿಲ್ 15ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಏಪ್ರಿಲ್ 16 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಗದಗ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಏಪ್ರಿಲ್ 17ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.






