ರಾಜಕೀಯ
ನರೇಂದ್ರ ಮೋದಿ ಸಮಾವೇಶಕ್ಕೆ ಬರುವಂತೆ ಬಿಎಸ್ವೈ ನೀಡಿದ ಆಹ್ವಾನವನ್ನು ತಿರಸ್ಕರಿಸಿದ ಶ್ರೀನಿವಾಸ ಪ್ರಸಾದ್

Views: 46
ಮೈಸೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಭಾನುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ ಆಯೋಜಿಸಿರುವ ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಬರುವಂತೆ ನೀಡಿದ ಆಹ್ವಾನವನ್ನು ತಿರಸ್ಕರಿಸಿದರು. ಆರೋಗ್ಯ ಸ್ಪಂದಿಸುವುದಿಲ್ಲ, ಆಗುವುದಿಲ್ಲ ಎಂದು ಕೈಮುಗಿದು ಹೇಳಿಕೊಂಡರು.
ನಾನು ಬಿಜೆಪಿಯಿಂದಲೇ ನಿವೃತ್ತಿ ಆಗಿದ್ದೇನೆ. ಹೋದ ತಿಂಗಳು ದೊಡ್ಡ ಕಾರ್ಯಕ್ರಮ ಮಾಡಿ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದೇನೆ. ಯಾವುದೇ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿಸಿದರು.
ಬಹಳಷ್ಟು ಚುನಾವಣೆ ಎದುರಿಸಿದ್ದೇನೆ. ಸಾಕಾಗಿದೆ. ಜರ್ಜರಿತನಾಗಿದ್ದೇನೆ. ಆರೋಗ್ಯವೂ ಸರಿ ಇಲ್ಲ. ಸ್ವಲ್ಪ ದೂರವೂ ನಡೆಯಲಾಗುವುದಿಲ್ಲ. ನಿಮ್ಮ ಮೇಲೆ ಗೌರವವಿದೆ. ನೀವು ಬಂದಿದ್ದು ಬಹಳ ಸಂತೋಷವಾಯಿತು ಎಂದು ತಿಳಿಸಿದರು.






