ಕರಾವಳಿ

ಮಂಗಳೂರು ನಿರ್ಮಾಣ ಹಂತದ ಸೇತುವೆ ಕುಸಿದು 7 ಮಂದಿ ರಕ್ಷಣೆ

Views: 47

ಮಂಗಳೂರು: ದ‌ಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.

ಪುತ್ತೂರು ತಾಲೂಕಿನ ಪುಣಚ ಗ್ರಾಮದ ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾಂಕ್ರೀಟ್‌ ಮಿಕ್ಸ್‌ ಹಾಕುವಾಗ ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದಿದೆ. ಪರಿಣಾಮ ಸೇತುವೆ ಸಾಮಾಗ್ರಿಯ ಮಧ್ಯೆ ಓರ್ವ ಕಾರ್ಮಿಕ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಉಳಿದ ಆರು ಮಂದಿಯನ್ನು ಸ್ಥಳೀಯರು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

Related Articles

Back to top button
error: Content is protected !!