ಲೋಕಸಭೆ ಚುನಾವಣೆ ನಂತರ ಡಿಕೆಶಿ ಮುಖ್ಯಮಂತ್ರಿ ಆಗ್ತಾರಾ?..ದೆಹಲಿಯಲ್ಲಿ ಎಲ್ಲಾ ತೀರ್ಮಾನವಾಗಿದೆ; ಸ್ವಲ್ಪ ದಿನ ಕಾಯಿರಿ :ಡಿಕೆಶಿ

Views: 39
ಮೈಸೂರು :ದೆಹಲಿಯಲ್ಲಿ ಎಲ್ಲವೂ ತೀರ್ಮಾನವಾಗಿದೆ. ಸ್ವಲ್ಪ ದಿನ ಕಾಯಿರಿ. ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಡಿ. ನನ್ನ ಕೈ ಬಲ ಪಡಿಸಲು ಸಹಕರಿಸಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮೈಸೂರು ನಗರದಲ್ಲಿ ನಡೆದ ಮೈಸೂರು-ಕೊಡಗು ಜಿಲ್ಲೆಯ ಒಕ್ಕಲಿಗ ಜನಾಂಗದ ಮುಖಂಡರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮೈಸೂರಿನಲ್ಲಿ ಒಕ್ಕಲಿಗರ ಬೆಳವಣಿಗೆಗೆ ಸ್ಪಲ್ಪ ಸಮಸ್ಯೆಗಳಿವೆ. ಅದನ್ನು ಮುಂದಿನ ದಿನಗಳಲ್ಲಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಲೋಕಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾ? ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡುತ್ತಿರುವ ಹೇಳಿಕೆ ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ. ಮೈಸೂರು ಹಾಗೂ ಚಾಮರಾಜನಗರ ಸವಾಲನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಬರೋಬ್ಬರಿ 9 ದಿನ ಈ ಕ್ಷೇತ್ರದಲ್ಲಿ ಕಳೆದಿದ್ದಾರೆ. ನಾನು ಬೇಕೋ ಬೇಡ್ವೋ ಎಂದು ಭಾಷಣದಲ್ಲಿ ಸಿದ್ದರಾಮಯ್ಯ ಜನರನ್ನು ಕೇಳುತ್ತಿದ್ದಾರೆ. ಇತ್ತ ದೆಹಲಿಯಲ್ಲಿ ಎಲ್ಲಾ ನಿರ್ಧಾರವಾಗಿದೆ. ನೀವು ತಲೆಕೆಡಿಸಿಕೊಳ್ಳಬೇಡಿ, ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ






