ಇತರೆ
ಕಾರು,ಬಸ್ ಡಿಕ್ಕಿ: ಮೂವರು ಸಾವು, ಓರ್ವ ಗಂಭೀರ

Views: 46
ಧಾರವಾಡ: ಕಾರೊಂದು ಖಾಸಗಿ ಬಸ್ಗೆ ಡಿಕ್ಕಿ ಹೊಡೆದು ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಅಂಚಟಗೇರಿ ಗ್ರಾಮದ ಸಮೀಪ ನಡೆದಿದೆ.
ಅಂಚಟಗೇರಿ ಗ್ರಾಮದ ಸಮೀಪ ಖಾಸಗಿ ಬಸ್ ಹೋಗುತ್ತಿದ್ದಾಗ ಈ ವೇಳೆ ವೇಗವಾಗಿ ಬಂದ ಕಾರು ರಭಸದಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಒಳಗಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯವರು ಎಂದು ಗುರುತಿಸಲಾಗಿದೆ. ಈ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಅಪಘಾತದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ತನಿಖೆಯಿಂದ ಇನ್ನಷ್ಟು ಮಾಹಿತಿ ಪೊಲೀಸರಿಗೆ ತಿಳಿಯಲಿದೆ.






