ಇತರೆ

ದೋಣಿ ಮಗುಚಿ ಬಿದ್ದು 6 ಶಾಲಾ ಮಕ್ಕಳು ಸಾವು

Views: 46

ಶ್ರೀನಗರ,ಜಮ್ಮು-ಕಾಶ್ಮೀರದ ಝೇಲಂ ನದಿಯಲ್ಲಿ ಇಂದು ಬೆಳಗ್ಗೆ ದೋಣಿಯೊಂದು ಮಗುಚಿ ಬಿದ್ದು ಆರು ಶಾಲಾ ಮಕ್ಕಳು ಮೃತಪಟ್ಟಿದ್ದು, ಹಲವಾರು ನಾಪತ್ತೆಯಾಗಿದ್ದಾರೆ.

ಮಕ್ಕಳು ಸೇರಿ ಹಲವರು ಮಂದಿ ಸಂಚರಿಸುತ್ತಿದ್ದ ವೇಳೆ ದೋಣಿಯು ಮಗುಚಿದೆ. ಹಲವು ಮಂದಿ ನೀರಿನಲ್ಲಿ ಮುಳುಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಏರ್‌ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ನಾಲ್ವರು ಶಾಲಾ ಮಕ್ಕಳು ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಇದುವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ.ಜಮ್ಮು- ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿದೆ. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ದೋಣಿ ಮಗುಚಿದೆ.

ಅಗತ್ಯಕ್ಕಿಂತ ಹೆಚ್ಚಿನ ಜನ ದೋಣಿಯಲ್ಲಿದ್ದ ಕಾರಣ ದುರಂತ ಸಂಭವಿಸಿದೆಯೋ, ನೀರಿನ ಸುಳಿವಿಗೆ ಸಿಲುಕಿ ಮಗುಚಿದೆಯೋ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣೆಗೆ ಸ್ಥಳೀಯರೂ ಕೈ ಜೋಡಿಸಿದ್ದಾರೆ.

Related Articles

Back to top button
error: Content is protected !!