ಇತರೆ

ಭೀಕರ ಅಪಘಾತ :ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ:10 ಮಂದಿ ಸ್ಥಳದಲ್ಲೇ ಸಾವು

Views: 205

ಗಾಂಧಿನಗರ: ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ಅಹಮದಾಬಾದ್ ವಡೋದರಾ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

ವಡೋದರಾದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಕಾರು ಮುಂದೆ ಹೋಗುತ್ತಿದ್ದ ಟ್ರಕ್ಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ 10 ಮಂದಿ ಸಾವನ್ನಪ್ಪಿದ್ದು, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಕಿರಿತ್ ಚೌಧರಿ ತಿಳಿಸಿದ್ದಾರೆ.

ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!