ರಾಜಕೀಯ

ಅಧಿಕಾರ ಹಿಡಿಯಲೇಬೇಕೆಂದು ಕಾಂಗ್ರೆಸ್‌ INDIA ಒಕ್ಕೂಟಕ್ಕೆ  ಕ್ಷೇತ್ರಗಳನ್ನು ಬಿಟ್ಟುಕೊಟ್ಟ ಕಾಂಗ್ರೆಸ್!

Views: 48

ನವದೆಹಲಿ: ಕೇವಲ 326 ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ತೀರ್ಮಾನಿಸಿರುವ ಕಾಂಗ್ರೆಸ್ ಈವರೆಗೂ 281 ಅಭ್ಯರ್ಥಿಗಳನ್ನಷ್ಟೇ ಪ್ರಕಟಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಲವಾಗಿರುವ ಎನ್‌ಡಿಎ (NDA) ಒಕ್ಕೂಟವನ್ನು ಏಕಾಂಗಿಯಾಗಿ ಎದುರಿಸಿ ಗೆಲ್ಲುವುದು ಕಷ್ಟ ಸಾಧ್ಯ ಎಂದು ಅರಿತಿರುವ ಕಾಂಗ್ರೆಸ್ ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿದೆ.

ಕರ್ನಾಟಕ, ತೆಲಂಗಾಣ, ಪಂಜಾಬ್, ಛತ್ತೀಸ್‌ಗಡ, ಉತ್ತರಾಖಂಡ್, ಹಿಮಾಚಲಪ್ರದೇಶ, ಗೋವಾ, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ಆರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾತ್ರ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.

ಉಳಿದ ರಾಜ್ಯಗಳಲ್ಲಿ ಮಿತ್ರಪಕ್ಷಗಳ ಜೊತೆ ಸೀಟು ಹಂಚಿಕೊಂಡಿದೆ. ಉತ್ತರಪ್ರದೇಶ(80), ಮಹಾರಾಷ್ಟ್ರ (48), ಬಿಹಾರ(40) ಮತ್ತು ತಮಿಳುನಾಡು(39) ಒಟ್ಟು 207 ಸ್ಥಾನಗಳಿದ್ದು, ಈ ಪೈಕಿ ಕೇವಲ 52ರಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧೆ ಮಾಡಿದೆ. ಅಂದರೆ 25.12%ರಷ್ಟು ಕಡೆ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

1996ರಲ್ಲಿ 529 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 140 ರಲ್ಲಿ ಜಯಗಳಿಸಿತ್ತು.1999 ರಲ್ಲಿ 453 ರಲ್ಲಿ ಸ್ಪರ್ಧಿಸಿದರೆ 2004 ರಲ್ಲಿ 417 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. 2009ರ ಚುನಾವಣೆಯಲ್ಲಿ 440 ಕ್ಷೇತ್ರಗಳ ಪೈಕಿ 206 ಅಭ್ಯರ್ಥಿಗಳು ಜಯಗಳಿಸಿದ್ದರು.

2014ರಲ್ಲಿ 464 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿದಿದ್ದರೂ ಮೋದಿ ಅಲೆಗೆ ಕೇವಲ 44 ಮಂದಿ ಮಾತ್ರ ಜಯಗಳಿಸಿದ್ದರು. 2019ರಲ್ಲಿ 421 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ  52 ಮಂದಿ ಮಾತ್ರ ಗೆದ್ದಿದ್ದರು. 2024ರ ಚುನಾವಣೆಯಲ್ಲಿ ಮೋದಿಯನ್ನು ಸೋಲಿಸಿ ಕೇಂದ್ರದಲ್ಲಿ ಅಧಿಕಾರವನ್ನು ಹಿಡಿಯಲೇಬೇಕೆಂದು ಕಾಂಗ್ರೆಸ್‌ INDIA ಒಕ್ಕೂಟಕ್ಕೆ ತನ್ನ ಹಲವು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದು ಕೇವಲ 326 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

Related Articles

Back to top button
error: Content is protected !!