ಇತರೆ
ಮಂಡ್ಯದಲ್ಲಿ ತಳ್ಳುವ ಗಾಡಿಯಲ್ಲಿ ಬಂದ ಐಸ್ ಕ್ರೀಂ ತಿಂದು ಅವಳಿ ಮಕ್ಕಳು ನಿಗೂಢ ಸಾವು

Views: 135
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಇಲ್ಲಿನ ನಿವಾಸಿ ಪೂಜಾ, ಪ್ರಸನ್ನ ದಂಪತಿಗಳ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ ಕಂದಮ್ಮಗಳು.
ನಿನ್ನೆ ಮಧ್ಯಾಹ್ನ ನಡೆದಿರೋ ಘಟನೆ ಇದಾಗಿದೆ. ಮಕ್ಕಳಿಗೆ ಮಧ್ಯಾಹ್ನ ತಾಯಿ ಐಸ್ ಕ್ರೀಂ ತಿನ್ನಿಸಿದ್ದಾರೆ. ಆನಂತರ ಮಕ್ಕಳು ಅಸ್ವಸ್ಥಗೊಂಡಿದ್ದಾರೆಂದು ಆರೋಪಿಸಿದ್ದಾರೆ.
ತಳ್ಳುವ ಗಾಡಿಯಲ್ಲಿ ಐಸ್ ಕ್ರೀಂ ಪಡೆದಿದ್ದರು. ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್ ಕ್ರೀಂ ತಿಂದಿದ್ದರು. ಐಸ್ ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಆದರೆ ತ್ರಿಶುಲ್ ಹಾಗೂ ತ್ರಿಶ ಐಸ್ ಕ್ರೀಂ ತಿಂದು ಸಾವನ್ನಪ್ಪಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.
ಆದರೆ ಕಂದಮ್ಮಗಳ ಸಾವಿಗೆ ಇದುವರೆಗೂ ನೈಜ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಮಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಲಿದೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






