ಇತರೆ
ಹುಬ್ಬಳ್ಳಿ ಕಾರ್ಪೊರೇಟರ್ ಮಗಳನ್ನು ಪ್ರೀತಿಸಿದ ಯುವಕ ಕಾಲೇಜ್ ಕ್ಯಾಂಪಸ್‌ನಲ್ಲಿ ಚಾಕುನಿಂದ ಇರಿದು ಕೊಲೆ

Views: 232
ಹುಬ್ಬಳ್ಳಿ: ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೋರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕೋಲೆ ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಮಗಳನ್ನ ಕೊಲೆ ಮಾಡಿದ ಆರೋಪಿ ಆಕೆಯನ್ನು ಪ್ರೀತಿಸುತ್ತಿದ್ದನು ಎನ್ನುವುದು ವಿಚಾರಣೆಯಲ್ಲಿ ಗೊತ್ತಾಗಿದೆ.
ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಸ್ಥಳದಿಂದ ಪರಾರಿಯಾಗಿದ್ದನು. ಈ ಸಂಬಂಧ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.






