ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ!

Views: 164
ಗದಗ: ಮಲಗಿದಲ್ಲೇ ನಾಲ್ಕು ಜನರ ಭೀಕರ ಹತ್ಯೆಗೈದ ಪ್ರಕರಣವೊಂದು ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ. ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.
ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರನ್ನು ಕೊಲೆ ಮಾಡಲಾಗಿದೆ. ಉಪಾಧ್ಯಕ್ಷೆ ಸುನಂದಾ ಬಾಕಳೆ, ಪುತ್ರ ಕಾರ್ತಿಕ್ ಬಾಕಳೆ 27, ಪರಶುರಾಮ 55, ಪತ್ನಿ ಲಕ್ಷ್ಮೀ 45, ಪುತ್ರಿ ಆಕಾಂಕ್ಷಾ 16 ಕೊಲೆಯಾದವರು ಎಂದು ತಿಳಿದುಬಂದಿದೆ.
ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಈ ಮೂವರು ಕೊಪ್ಪಳ ಮೂಲದವರು. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಕಾರ್ಯಕ್ರಮಕ್ಕಾಗಿ ಸಂಬಧಿಗಳು ಆಗಮಿಸಿದ್ದರು. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಕುಟುಂಬಸ್ಥರು ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡ್ತಾಯಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.
ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.






