ಬೆಂಗಳೂರು ಪ್ರತ್ಯೇಕ ಪ್ರಕರಣದಲ್ಲಿ ಯವಕರಿಬ್ಬರ ಬರ್ಬರ ಹತ್ಯೆ

Views: 50
ಬೆಂಗಳೂರು: ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಲ್ಲಕ್ಕಿ ವೇಳೆ ಯುವಕನ ಬರ್ಬರ ಕೊಲೆಯಾಗಿದೆ.ಸತೀಶ್ (32) ಹತ್ಯೆಯಾದವನು. ನಿನ್ನೆ ಗುರುವಾರ ರಾತ್ರಿ ಕರಗ ನಡೆಯುತ್ತಿದ್ದ ವೇಳೆ ಕಿಡಿಗೇಡಿಗಳು ಸತೀಶ್‌ನನ್ನು ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಸಿಮೆಂಟ್ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಸತೀಶ್ ಶಿವಾಜಿನಗರದ ನಿವಾಸಿ ಎಂದು ತಿಳಿದು ಬಂದಿದೆ
ಸದ್ಯ ಸತೀಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ. ಕೊಲೆ ಮಾಡಿದ ಆರೋಪಿಗಳಿಗೆ ಹುಡುಕಾಟವನ್ನು ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಬೆಂಗಳೂರಿನ ಹೊರಮಾವಿನಲ್ಲಿ ಹಂತಕರು ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೀರ್ತಿ ಅಲಿಯಾಸ್ ಕಿರಿಕ್ ಕೀರ್ತಿ (28) ಕೊಲೆಯಾದ ಯುವಕ
ಕೌಟುಂಬಿಕ ಕಲಹದಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಹಂತಕರ ಪತ್ತೆಗೆ ಶೋಧ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.






