ಕರಾವಳಿ

ಉಡುಪಿ: ಬಸ್-ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

Views: 185

ಉಡುಪಿ. ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಶನಿವಾರ ಸಂಜೆ ನಡೆದಿದೆ.

ಮೃತರು ಬಾಗಲಕೋಟೆ ನಿವಾಸಿ ಬಸಪ್ಪ (30) ಎಂದು ತಿಳಿದು ಬಂದಿದೆ.

ಬಸ್ ಉಡುಪಿಯಿಂದ ಕರಾವಳಿ ಬೈಪಾಸ್ ಮಾರ್ಗವಾಗಿ ಸಂತೆಕಟ್ಟೆಯತ್ತ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದ ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

 

 

Related Articles

Back to top button
error: Content is protected !!