ಇತರೆ

ನೇಹಾ ಹತ್ಯೆ ಪ್ರಕರಣಕ್ಕೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬೆಚ್ಚಿಬೀಳಿಸುವ ವರದಿ ಬಹಿರಂಗ!

Views: 433

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶವೊಂದು ಬಹಿರಂಗವಾಗಿದೆ.

ಆರೋಪಿ ಫಯಾಜ್, ನೇಹಾಳನ್ನು 9 ಅಲ್ಲ ಬದಲಾಗಿ 14 ಬಾರಿ ಚುಚ್ಚಿ ಕೊಂದಿದ್ದಾನೆ. ನೇಹಾ ಹಿರೇಮಠ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ. ಹೃದಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ಕುತ್ತಿಗೆಗೆ ಹಲವು ಬಾರಿ ಇರಿದಿದ್ದರಿಂದ ರಕ್ತನಾಳ ಕಟ್ ಆಗಿ ವಿಪರೀತ ರಕ್ತಸ್ರಾವವಾಗಿದೆ ಎಂಬ ವಿಚಾರ ಬಯಲಾಗಿದೆ.

ಪ್ರಕರಣದ ವಿವರ:

ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

 

Related Articles

Back to top button
error: Content is protected !!