ಕರಾವಳಿ

ಕೋಟ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಪಲ್ಟಿ ಸವಾರ ಯುವಕ ಸಾವು 

Views: 339

ಕೋಟ: ಇಲ್ಲಿನ ಬಸ್ ನಿಲ್ದಾಣದ ಹತ್ತಿರ ಬೈಕ್ ಪಲ್ಟಿ ಆಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ನಡೆದಿದೆ.

ಮೃತಪಟ್ಟ ಯುವಕ ಕೋಟ ಮಣೂರು ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಎಂದು ಗುರುತಿಸಲಾಗಿದೆ.

ಬೈಕ್ ಸವಾರ ಇಂದು ಬೆಳಿಗ್ಗೆ ಕೋಟ ಮಣೂರು ಕಡೆ ಬರುತ್ತಿದ್ದ ವೇಳೆ ಕೋಟ ಬಸ್ ನಿಲ್ದಾಣ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.

ಅಪಘಾತ ನಡೆದ ತಕ್ಷಣ ಸ್ಥಳೀಯರು ಸೇರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರಕ್ಕೆ ಸಾಗಿಸಿದ್ದಾರೆ.

ಕೋಟ ಪೊಲೀಸರು ಸ್ಥಳಕ್ಕಾಗಿಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!