ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಆರೋಗ್ಯದಲ್ಲಿ ಏರುಪೇರು: ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ

Views: 56
ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯಕ್ಕೀಡಾಗಿದ್ದು, ಸದ್ಯ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ಮಂಡಿ ನೋವಿನಿಂದ ಬಳಲುತ್ತಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ನೀಡುವಾಗ ಹೃದಯದಲ್ಲಿ ಏರುಪೇರು ಆಗಿದ್ದರಿಂದ ಅವರನ್ನು ತೀವ್ರ ತುರ್ತು ಚಿಕಿತ್ಸಾ ಘಟಕದಲ್ಲಿ ಇರಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಮೊನ್ನೆ ಮೊನ್ನೆಯಷ್ಟೇ ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಐಸಿಯು ವೆಂಟಿಲೇಟರ್ನಲ್ಲಿ ಎರಡು ದಿನ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಇಲ್ಲಿ ಸುಧಾರಿಸಿಕೊಂಡ ನಂತರ ಅವರು ಮನೆಗೆ ಮರಳಿದ್ದರು. ಆದರೆ ಮತ್ತೆ ಅವರ ಕಾಲಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಇನ್ನು ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರಿದ್ದರು. ಇದು ಚಾಮರಾಜನಗರ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಸಿಎಂ ಸಿದ್ದರಾಮಯ್ಯ ಶ್ರೀನಿವಾಸ್ ಪ್ರಸಾದ್ರನ್ನು ಇತ್ತೀಚೆಗೆ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಹೀಗಾಗಿ ಕಾಂಗ್ರೆಸ್ ಕಡೆ ಶ್ರೀನಿವಾಸ್ ಪ್ರಸಾದ್ ವಾಲಿದ್ದಾರೆ ಎನ್ನುವ ಅನುಮಾನಕ್ಕೆ ಕಾರಣವಾಗಿತ್ತು. ಆದರೆ ಶ್ರೀನಿವಾಸ್ ಪ್ರಸಾದ್ ಇತ್ತೀಚೆಗಷ್ಟೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.






