ರಾಜಕೀಯ

ಇಂದು ರಾಜ್ಯದ 14 ಲೋಕ ಸಭಾ ಕ್ಷೇತ್ರಗಳಲ್ಲಿ ಮತದಾನ.‌. ಯಾವ್ಯಾವ ಕ್ಷೇತ್ರದಲ್ಲಿ ಮತದಾನ, ಅಭ್ಯರ್ಥಿಗಳು ಯಾರು?

Views: 77

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಇಂದು ಮತದಾನ ಉಡುಪಿ ಚಿಕ್ಕಮಗಳೂರು ಸೇರಿದಂತೆ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.. ಮತದಾನ ಹಬ್ಬಕ್ಕೆ ಚುನಾವಣಾ ಆಯೋಗ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, 2.88 ಕೋಟಿ ಮತದಾರರು 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ

ಯಾವ್ಯಾವ ಕ್ಷೇತ್ರದಲ್ಲಿ ಮತದಾನ? ಅಭ್ಯರ್ಥಿಗಳು ಯಾರು?

ಉಡುಪಿ ಚಿಕ್ಕಮಗಳೂರು :ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಕಣದಲ್ಲಿದ್ದಾರೆ.

ಹಾಸನ: ಹಾಸನದಲ್ಲಿ ಕಾಂಗ್ರೆಸ್ಸಿನಿಂದ ಯಸ್ ಪಟೇಲ್ ಸ್ಪರ್ಧಿಸಿದ್ದು, ಎದುರಾಳಿಯಾಗಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕಣದಲ್ಲಿದ್ದಾರೆ.

ದಕ್ಷಿಣ ಕನ್ನಡ :ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಹಾಗೂ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಸ್ಪರ್ಧೆಯಲ್ಲಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗದಲ್ಲಿ  ಕಾಂಗ್ರೆಸ್ಸಿನ ಬಿ.ಎನ್.ಚಂದ್ರಪ್ಪ ಸ್ಪರ್ಧಿಸಿದ್ರೆ ಬಿಜೆಪಿಯಿಂದ ಗೋವಿಂದ ಕಾರಜೋಳ ಸ್ಪರ್ಧೆ ಮಾಡಿದ್ದಾರೆ.

ತುಮಕೂರು: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಕಣದಲ್ಲಿದ್ದರೆ. ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ.ಸೋಮಣ್ಣ ಕಣದಲ್ಲಿದ್ದಾರೆ.

ಮಂಡ್ಯ : ಜಿದ್ದಾಜಿದ್ದಿನ ಕ್ಷೇತ್ರ ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಉದ್ಯಮಿ ವೆಂಕಟರಮಣೇಗೌಡ ಕಣಕ್ಕಿಳಿದಿದ್ರೆ ಎದುರಾಳಿಯಾಗಿ ಮೈತ್ರಿ ಅಭ್ಯರ್ಥಿ, ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ.

ಮೈಸೂರು :ಮೈಸೂರಿನಲ್ಲಿ ಕಾಂಗ್ರೆಸ್ಸಿನ ಎಂ.ಲಕ್ಷ್ಮಣ್ ಸ್ಪರ್ಧೆ ಮಾಡಿದ್ದು ಮೈತ್ರಿ ಅಭ್ಯರ್ಥಿಯಾಗಿ ಮಹಾರಾಜ ಯದುವೀರ್ ಒಡೆಯರ್ ಸ್ಪರ್ಧಿಸಿದ್ದಾರೆ.

ಚಾಮರಾಜನಗರ : ಚಾಮರಾಜನಗರದಲ್ಲಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಾಂಗ್ರೆಸ್ ನಿಂದ ಬಿಜೆಪಿಯಿಂದ ಎಸ್.ಬಾಲರಾಜು ಕಣದಲ್ಲಿದ್ದಾರೆ.

ಬೆಂಗಳೂರು ಗ್ರಾಮಾಂತರ :ಜಿದ್ದಾಜಿದ್ದಿನ ಕ್ಷೇತ್ರ ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್ ಸ್ಪರ್ಧಿಸಿದ್ದರೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿ.ಎನ್.ಮಂಜುನಾಥ್ ಕಣದಲ್ಲಿದ್ದಾರೆ.

ಬೆಂಗಳೂರು ದಕ್ಷಿಣ:ಬೆಂಗಳೂರು ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೌಮ್ಯರೆಡ್ಡಿ ಸ್ಪರ್ಧಿಸಿದ್ದು ಬಿಜೆಪಿಯಿಂದ ತೇಜಸ್ವಿ ಸೂರ್ಯ ಸ್ಪರ್ಧಿಸಿದ್ದಾರೆ.

ಬೆಂಗಳೂರು ಉತ್ತರ:ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್ನಿಂದ ಮನ್ಸೂರ್ ಅಲಿಖಾನ್ ಸ್ಪರ್ಧಿಸಿದ್ದು ಬಿಜೆಪಿಯಿಂದ ಪಿ.ಸಿ.ಮೋಹನ್ ಕಣದಲ್ಲಿದ್ದಾರೆ.

ಬೆಂಗಳೂರು ಕೇಂದ್ರ :ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ನಿಂದ ಮನ್ಸೂರ್ ಆಲಿಖಾನ್  ಬಿಜೆಪಿಯಿಂದ ಪಿ.ಸಿ.ಮೋಹನ್ ಸ್ಪರ್ಧಾ ಕಣದಲ್ಲಿದ್ದಾರೆ.

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ  ರಕ್ಷಾರಾಮಯ್ಯ ಹಾಗೂ ಬಿಜೆಪಿಯಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಪರ್ಧಿಸಿದ್ದಾರೆ..

ಕೋಲಾರ :ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಸ್ಪರ್ಧೆ ಮಾಡಿದ್ರೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ಸ್ಪರ್ಧಿಸಿದ್ದಾರೆ.

ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳ ಪೈಪೋಟಿ ರಣ ರೋಚಕವಾಗಿದೆ.

Related Articles

Back to top button
error: Content is protected !!