ರಾಜಕೀಯ

ಆಕ್ಸಿಜನ್‌ ಸಮೇತ ಆಂಬ್ಯುಲೆನ್ಸ್‌ ಮೂಲಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಮಹಿಳೆ

Views: 88

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ   ಇಂದು ಮೊದಲ ಹಂತದ ಮತದಾನದಲ್ಲಿ  ಬೆಂಗಳೂರಿನ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಮತಕಟ್ಟೆಗೆ  ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಮತದಾನ ಹಕ್ಕು ಚಲಾವಣೆ ಮಾಡಿದ್ದಾರೆ.

Related Articles

Back to top button
error: Content is protected !!