ರಾಜಕೀಯ
ಚುನಾವಣಾ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಸಾವು

Views: 123
ಚಿತ್ರದುರ್ಗ, ಚಳ್ಳಿಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟ ಘಟನೆ ನಡೆದಿದೆ.

ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ದಾರಿ ಮಧ್ಯೆ ಮೃತಪಟ್ಟರು. ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.






