ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸಪೋರ್ಟ್ ಮಾಡಿಲ್ಲ ದೇವೇಗೌಡರ ಹೇಳಿಕೆಗೆ, ಜೆಡಿಎಸ್ ಪ್ರಚಾರಕ್ಕೆ ಕರೆದಿಲ್ಲ: ಸುಮಲತಾ ಸ್ಪಷ್ಟನೆ

Views: 53
ಮಂಡ್ಯ :ದೇವೇಗೌಡರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರಿಗೆ ಸರಿಯಾದ ಮಾಹಿತಿ ಇಲ್ಲದೆ ಆ ರೀತಿ ಹೇಳಿದ್ದಾರೆ. ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ದೊಡ್ಡರಸಿನಕೆರೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ದೊಡ್ಡವರು. ಆದರೆ, ಸ್ವತಂತ್ರ ಸಂಸದೆಯಾಗಿ ನನ್ನ ಜವಾಬ್ದಾರಿಯನ್ನ ನಿರ್ವಹಿಸಿದ್ದೀನಿ. ಮೋದಿಯವರು ಪ್ರಧಾನಿಯಾಗಬೇಕೆಂಬ ಉದ್ದೇಶದಿಂದ ನಾನು ಗೆದ್ದಂತಹ ಸೀಟ್ ತ್ಯಾಗ ಮಾಡಿದ್ದೀನಿ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಕೂಡ ಎನ್ಡಿಎಗೆ ಕೊಟ್ಟಿದ್ದೇವೆ. ಮೈತ್ರಿ ಪರ ನಮ್ಮ ಬೆಂಬಲಿಗರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ ಎಂದರು.
ನಾನು ಸುಮಲತಾ ಅವರ ಮನೆ ಬಾಗಿಲಿಗೇ ಹೋಗಿ ಸಹಕಾರ ಕೇಳಿದ್ದೇನೆ, ಇದಕ್ಕಿಂತ ಇನ್ನೇನು ಮಾಡಬೇಕು? ಎಂದು ಸಂಸದೆ ಸುಮಲತಾ ಅವರ ಹೇಳಿಕೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಜೆಡಿಎಸ್ ಅವರು ನನ್ನ ಪ್ರಚಾರಕ್ಕೆ ಕರೆದಿಲ್ಲ ಎಂಬ ಸುಮಲತಾ ಹೇಳಿಕೆ ಸಂಬಂಧ ಮದ್ದೂರಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನು ಎರಡು ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ ಎಂದರು.
ಸುಮಲತಾ ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸಪೋರ್ಟ್ ಮಾಡಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಆ ರೀತಿ ಯಾಕೆ ಹೇಳಿದ್ದಾರೆ ಅಂತ ನನಗೆ ಗೊತ್ತಿಲ್ಲ. ದೇವೇಗೌಡರಿಗೆ ಮಾಹಿತಿ ಕೊರತೆ ಇರಬೇಕು ಅನಿಸುತ್ತೆ ಎಂದರು.
ಪಕ್ಷಭೇದ ಮರೆತು ಕಾಂಗ್ರೆಸ್, ಬಿಜೆಪಿಯವ ನನ್ನ ಪರವಾಗಿ ಕೆಲಸ ಮಾಡಿದ್ದಾರೆ. ಯಾರು ವಿರೋಧ ಮಾಡಿಲ್ಲ. ಬೆಂಗಳೂರಿನಿಂದ ಬಂದು ಸುಮಲತಾ ಅವರೂ ನನಗೇ ಮತ ಹಾಕಿದ್ದಾರೆ. ಅಂಬರೀಷ್ ಅಭಿಮಾನಿಗಳು ಮತ ಹಾಕಿದ್ದಾರೆ. ಅತ್ಯಂತ ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.






