ರಾಜಕೀಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಏರುವಾಗ ಜಾರಿ ಬಿದ್ದು ಗಾಯ

Views: 90

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಏರುತ್ತಿದ್ದಾಗ ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಹೆಲಿಕಾಪ್ಟರ್‌ ಏರಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಮುಂದಾದಾಗ ನಿಯಂತ್ರಣ ಕಳೆದುಕೊಂಡು ಮಮತಾ ಬಿದ್ದುಬಿಟ್ಟರು. ಮುಖ್ಯಮಂತ್ರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರ ಭದ್ರತಾ ಸಿಬ್ಬಂದಿ ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ.

ನಂತರ ಮಮತಾ ತಮ್ಮ ಮುಂದಿನ ಪ್ರಯಾಣವನ್ನು ಅಸನ್ಸೋಲ್‌ಗೆ ಮುಂದುವರಿಸಿದೃು ಎಂದು ಗೊತ್ತಾಗಿದೆ. ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಬಿದ್ದು ಗಾಯಗೊಂಡಿರುವುದು ಇದು ಎರಡನೇ ಬಾರಿ. ಮಾರ್ಚ್ 14ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದೊಳಗೆ ಬಿದ್ದು ಹಣೆ ಮತ್ತು ಮೂಗಿನ ಮೇಲೆ ಗಂಭೀರವಾದ ಗಾಯ ಮಾಡಿಕೊಂಡಿದ್ದರು. ಮಮತಾ ಅವರನ್ನು ಹಲವು ಗಂಟೆಗಳ ಕಾಲ ಆಸ್ಪತ್ರೆಗೆ ಸೇರಿಸಬೇಕಾಗಿ ಬಂದಿತ್ತು.

 

Related Articles

Back to top button
error: Content is protected !!