ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Views: 43
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (91) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನ ಏರ್ಪೋರ್ಟ್ ರೋಡ್ನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ.ಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಎಸ್.ಎಂ.ಕೃಷ್ಣ ಅವರು ಕಳೆದ 12 ದಿನಗಳ ಹಿಂದೆಯೇ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆರೋಗ್ಯದಲ್ಲಿ ತೀವ್ರ ಏರುಪೇರಾದ ಕಾರಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಯಿತು.
91 ವರ್ಷ ವಯಸ್ಸಿನ ಎಸ್.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದಾರೆ. ಮೊದಲು ಕಾಂಗ್ರೆಸ್ನಲ್ಲಿದ್ದು ಕೇಂದ್ರ ಸಚಿವರು, ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ, ನಂತರ ಪಕ್ಷ ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಎರಡು ವರ್ಷದ ಹಿಂದೆ ಅವರು ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿರುವ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ ವರ್ಷ ಎಸ್.ಎಂ. ಕೃಷ್ಣ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ. “ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದ ಮಾತ್ರಕ್ಕೆ ನಾನು ಸಂಪೂರ್ಣವಾಗಿ ಸನ್ಯಾಸಿಯಾಗುತ್ತೇನೆ ಎಂದಲ್ಲ, ಪಕ್ಷ ಇಲ್ಲವೇ ನಾಯಕರು ಸಲಹೆ ಕೇಳಿದರೆ ಕೊಡುವುದಾಗಿಯೂ ಅವರು ತಿಳಿಸಿದ್ದಾರೆ.






