ಜನಮನ

ಕರ್ನಾಟಕದಲ್ಲಿ ಗರಿಷ್ಠ ತಾಪಮಾನ, ರೆಡ್ ಅಲರ್ಟ್,ಮೈಸೂರಲ್ಲಿ ಆರೆಂಜ್ ಅಲರ್ಟ್ ಘೋಷಣೆ! ಬಿಸಿಲಿಗೆ ಹೊರ ಬಾರದಂತೆ ಎಚ್ಚರಿಸಿದ ಹವಾಮಾನ ಇಲಾಖೆ..!

Views: 167

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಸೆಕೆ ವಿಪರೀತ ಹೆಚ್ಚಾಗಲಿದೆ.

ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 42.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಾವೇರಿಯಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 41.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 42.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮೈಸೂರಲ್ಲಿ ಆರೆಂಜ್ ಅಲರ್ಟ್ ಘೋಷಣೆ! ಬಿಸಿಲಿಗೆ ಹೊರ ಬಾರದಂತೆ ಎಚ್ಚರಿಸಿದ ಹವಾಮಾನ ಇಲಾಖೆ

ದಿನೇ ದಿನೇ ಹೆಚ್ಚುತ್ತಿರುವ ಬಿಸಿಲ ಬೇಗೆಗೆ ರಾಜ್ಯದ ಜನರು ಕಂಗಾಲಾಗಿದ್ದಾರೆ. ಬಿಸಿಲಿನ ತಾಪ ತಾಳಲಾರದೆ ಕಂಗೆಟ್ಟಿದ್ದಾರೆ. ಇತ್ತ ಮೈಸೂರಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಣ ಬಿಸಿಲಿನಿಂದ ಜನರು ಬಳಲಿ ಬೆಂಡಾಗಿದ್ದಾರೆ. ಹೀಗಾಗಿ 1 ನೇ ತಾರೀಖಿನಿಂದ 5 ರವರೆಗೆ ಮೈಸೂರಿನಲ್ಲಿ ಅರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಖದ ಅಲೆ ಎಚ್ಚರಿಕೆಯಿಂದ ಈ ಘೋಷಣೆ ಮಾಡಲಾಗಿದೆ.

ಭಾರತದ ಹವಾಮಾನ ಇಲಾಖೆಯು ವಯಸ್ಸಾದವರು, ಮಕ್ಕಳನ್ನು ಬಿಸಿಲಿಗೆ ಕರೆ ತರಬೇಡಿ. 12 ಗಂಟೆಯಿಂದ 3 ಗಂಟೆಯ ವರೆಗೆ ಬಿಸಿಲಲ್ಲಿ ಕೆಲಸ ಮಾಡಬೇಡಿ. ಬಿಸಿಲಿಗೆ ಹೋಗುವ ಮುನ್ನ ಟೋಪಿ, ಕನ್ನಡಕ ಹಾಕಿಕೊಳ್ಳುವಂತೆ ಸೂಚನೆ ನೀಡಿದೆ.

Related Articles

Back to top button
error: Content is protected !!