ಹೆಚ್.ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ವಿರುದ್ಧ ಮನೆ ಕೆಲಸದಾಕೆ ದೂರು..ಭವಾನಿ ರೇವಣ್ಣಗೆ ಎಸ್ಐಟಿ ನೋಟಿಸ್!

Views: 204
ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕುಟುಂಬಕ್ಕೆ ಶಾಕ್ ಮೇಲೆ ಶಾಕ್ ಎದುರಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಪ್ಪ ಮಗನಿಗೆ ನೋಟಿಸ್ ಕೊಟ್ಟು ತನಿಖೆ ನಡೆಸುತ್ತಿರುವ ಪೊಲೀಸರು ಇಂದು ಹಾಸನದ ಹೆಚ್.ಡಿ ರೇವಣ್ಣ ಮನೆಗೆ ಭೇಟಿ ನೀಡಿದ್ದಾರೆ.
ಹೊಳೆನರಸೀಪುರದ ಮನೆಗೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು ಕೆಲ ನಿಮಿಷಗಳ ಕಾಲ ಮಾಹಿತಿ ಕೇಳಿದ್ದಾರೆ. ಪೊಲೀಸರು ಮನೆಗೆ ಭೇಟಿ ಕೊಟ್ಟಾಗ ಹೆಚ್.ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಮನೆಯಲ್ಲಿಯೇ ಇದ್ದರು.
ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಮೇಲೆ ಮನೆ ಕೆಲಸದಾಕೆ ದೂರು ನೀಡಿದ್ದಾರೆ. ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಭವಾನಿ ರೇವಣ್ಣಗೂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇಂದು ಅಥವಾ ನಾಳೆ ವಿಚಾರಣೆಗೆ ಆಗಮಿಸುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಸ್ಥಳೀಯ ಪೊಲೀಸರ ಮೂಲಕ ಎಸ್ಐಟಿ ತಂಡ ನೋಟಿಸ್ ಜಾರಿ ಮಾಡಿದೆ. ಹೆಚ್.ಡಿ ರೇವಣ್ಣ ಅವರು ಜನಪ್ರತಿನಿಧಿ ಕೋರ್ಟ್ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹೀಗಿರುವಾಗ ಭವಾನಿ ರೇವಣ್ಣ ಅವರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ತಿಳಿಯಲಾಗಿದೆ.






