ಕರಾವಳಿ

ಬೆಳ್ತಂಗಡಿ: ಸವಣಾಲು ದೇವಸ್ಥಾನದ ಅರ್ಚಕ ನೇಣು ಬಿಗಿದು ಆತ್ಮಹತ್ಯೆ

Views: 66

ಬೆಳ್ತಂಗಡಿ: ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರ್ಸಿ ಮೂಲದ ವಿಜಯ್ ಭಟ್ (29) ಎಂಬವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಾಗಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.

ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಅವರಿಗೆ ಮೂರು ತಿಂಗಳ ಮಗು ಕೂಡ ಇದೆ. ಅವರು ವಾಸವಿದ್ದ ಕೊಠಡಿ ಯಲ್ಲಿ ಒಬ್ಬರೇ ಇದ್ದು, ದೇವಸ್ಥಾನಕ್ಕೆ ಎಂದಿನಂತೆ ಭಕ್ತರು ಪೂಜೆಗಾಗಿ ಬಂದಾಗ ಅರ್ಚಕರು ಬಂದಿರಲಿಲ್ಲ. ಕ್ಷೇತ್ರಕ್ಕೆ ಬಂದ ಭಕ್ತರು ಅರ್ಚಕರನ್ನು ಕರೆಯಲು ರೂಮಿನ ಬಳಿ ಹೋದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!