ರಾಜಕೀಯ

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ; ಕೋರ್ಟ್‌ ತಡೆಯಾಜ್ಞೆ

Views: 53

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

Related Articles

Back to top button
error: Content is protected !!