ಕರಾವಳಿ

ಉಡುಪಿ, ಮಂಗಳೂರು, 5 ದಿನ ಮಳೆ  ಮುನ್ಸೂಚನೆ ;ಆರೆಂಜ್ ಅಲರ್ಟ್ ಘೋಷಣೆ

Views: 175

ಉಡುಪಿ: ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಕರಾವಳಿಯ ಉಡುಪಿ, ಮಂಗಳೂರಿಗೆ ರಾಜ್ಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಇಂದಿನಿಂದ ಐದು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

video
play-sharp-fill
ಇಂದು ರಾತ್ರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿಯಲಿದೆ. ನಾಳೆ ಬೆಳಿಗ್ಗೆಯಿಂದ ಗಾಳಿ ಸಹಿತ ಭಾರಿ ಮಳೆ ಆರ್ಭಟಿಸಲಿದೆ. ಕಳೆದ ಒಂದು ವಾರದಿಂದ ಆಗಾಗ ಸಣ್ಣ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆ ಜೋರಾಗಿ ಬರಲಿದೆ. ಇಷ್ಟೇ ಅಲ್ಲ ಕರಾವಳಿ ಹಾಗೂ ಮಲೆನಾಡು ತಾಲ್ಲೂಕುಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಐದು ದಿನ ಮಳೆಯಾಗಲಿದೆ. ಹಾಗಾಗಿ ಕರಾವಳಿ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಮುನ್ಸೂಚನೆ ನೀಡಿರುವ ಹವಮಾನ ಇಲಾಖೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚನೆ ನೀಡಿದೆ.

Related Articles

Back to top button
error: Content is protected !!