ಬೃಹ್ಮಾವರ: ಶಿರೂರು ಮೂರ್ಕೈ ಸಮೀಪ ಹುಲ್ಲು ಕಟಾವು ಮಾಡುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ: ಆಸ್ಪತ್ರೆಗೆ ದಾಖಲು

Views: 230
ಬ್ರಹ್ಮಾವರ :ಶಿರೂರು ಮೂರ್ಕೈ ಸಮೀಪ ಹೆಗ್ಗುಂಜೆ ಗುಡ್ಡೆಯಲ್ಲಿ ತೋಟದ ಹುಲ್ಲು ಕಟಾವು ಮಾಡುತ್ತಿದ್ದ ವೇಳೆ ಚಿರತೆ ದಾಳಿ ಮಾಡಿ ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಸೋಮವಾರ ನಡೆದಿದೆ. ಇಲ್ಲಿನ ನಿವಾಸಿ ಕೃಷ್ಣ ನಾಯ್ಕ್ ದಾಳಿಗೊಳಗಾದವರು.
ಶಿರೂರು ಮೂರ್ಕೈ ಸಮೀಪವಿರುವ ವಿಖ್ಯಾತ್ ಕುಮಾರ್ ಶೆಟ್ಟಿ ಅವರ ಡೈರಿ ಫಾರ್ಮ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ನಾಯ್ಕ್ ದನ ಕರುಗಳಿಗೆ ಹುಲ್ಲು ತರಲು ತೋಟಕ್ಕೆ ತೆರಳಿದ್ದರು. ಆಗ ಹಠಾತ್ತನೆ ಚಿರತೆ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭಾಗದ ಹತ್ತಿರದ ಕೆದೂರು, ಬೇಳೂರು, ತೆಕ್ಕಟ್ಟೆ ಮಾಲಾಡಿಯಲ್ಲಿ ಚಿರತೆ ಹಾವಳಿ ವ್ಯಾಪಕವಾಗಿದೆ. ಹಲವು ಭಾರಿ ದಿನ ಕರುಗಳ ಮೇಲೆ ದಾಳಿ ಮಾಡಿದ್ದು, ಮನೆಯ ಸಾಕು ನಾಯಿನ್ನೇ ಹೊತ್ತೈದಿದೆ.ಇದೀಗ ಮನುಷ್ಯರ ಮೇಲೆಯೂ ದಾಳಿ ನಡೆಸಿರುವುದು ಸ್ಥಳೀಯರಲ್ಲಿ ಭಯ ಹುಟ್ಟಿಸಿದೆ.
ತೆಕ್ಕಟ್ಟೆ ಮಾಲಾಡಿ ಎಂಬಲ್ಲಿ 8 ಚಿರತೆಯನ್ನು ಸೆರೆಹಿಡಿಯಲಾಗಿದ್ದು, ಕೆದೂರು- ಶಾನಾಡಿ ಎಂಬಲ್ಲಿ ಬೋನ್ ಇರಿಸಲಾಗಿದ್ದು ಇಲ್ಲಿಯವರೆಗೂ ಚಿರತೆ ಸೆರೆಯಾಗಿಲ್ಲ ಈ ಪರಿಸರದಲ್ಲಿ ಶಾಲೆಗೆ ಹೋಗುವ ಮಕ್ಕಳು ಮತ್ತು ಸಂಜೆಯಾಗುತ್ತಲೇ ಈ ಸುತ್ತ ಮುತ್ತಲಿನ ಜನರು ತಿರುಗಾಡಲು ಭಯಭೀತರಾಗಿದ್ದಾರೆ.
ಸಂಬಂಧಪಟ್ಟ ಇಲಾಖೆ ಈ ಕುರಿತು ಗಮನಹರಿಸಿ ಚಿರತೆಯನ್ನು ಸೆರೆ ಹಿಡಿಯಬೇಕು ಮತ್ತು ಗಾಯಾಳುವಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.