ಕರಾವಳಿ

ಬಂಟ್ವಾಳ: ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ರಕ್ತಸಿಕ್ತ ಮೃತದೇಹ ಪತ್ತೆ 

Views: 69

ಬಂಟ್ವಾಳ : ಬಿ.ಸಿ.ರೋಡ್ – ತಲಪಾಡಿ ಸಮೀಪದ ಬಂಟರ ಭವನದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮೃತದೇಹವು ಭವನದ ಕಂಪೌಂಡ್ ನ ಒಳಭಾಗದಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿದೆ. ಎನ್ನಲಾಗಿದೆ. ಕಂಪೌಂಡ್ ಹೊರಗಡೆ ಸಂತೋಷ್ ಅವರ ಬೈಕ್ ಪತ್ತೆಯಾಗಿದೆ.

ಸಾವಿಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಪೊಲೀಸ್ ಮೂಲಗಳ ಪ್ರಕಾರ ಸಂತೋಷ್ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದು, ಆ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿರಬಹುದೆಂದು ಎಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ಮಾಹಿತಿ ತಿಳಿಯಬಹುದಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!