ಯುವಜನ

ಪ್ರೀತಿಸುವಂತೆ ಬೆನ್ನು ಬಿದ್ದ ಯುವಕ ಮತ್ತು ಆತನ ಸಹೋದರನ ಕೊಲೆ ಮಾಡಿದ ಯುವತಿಯ ಅಪ್ಪ 

Views: 76

ಬೆಳಗಾವಿ: ಪ್ರೀತಿಸುವಂತೆ ಬೆನ್ನು ಬಿದ್ದ ಯುವಕ ಹಾಗೂ ಆತನ ಸಹೋದರನನ್ನು ಬರ್ಬರ ಹತ್ಯೆ ಮಾಡಿರೋ ಘಟನೆ ಸವದತ್ತಿಯಲ್ಲಿ ನಡೆದಿದೆ.

ಯಲ್ಲಪ್ಪ ಹಳೇಗೋಡಿ (22) ಹಾಗೂ ಮಾಯಪ್ಪ ಹಳೇಗೋಡಿ (22) ಕೊಲೆಯಾದವರು

ಫಕೀರಪ್ಪ ಭಾಂವಿಹಾಳ (50) ಎಂಬಾತ ಈ ಇಬ್ಬರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೊಲೆಯಾದ ಯಲ್ಲಪ್ಪ ಹಳೇಗೋಡಿ ಆರೋಪಿ ಫಕೀರಪ್ಪನ‌ ಪುತ್ರಿಯನ್ನು ಪ್ರೀತಿಸುವಂತೆ ಬೆನ್ನು ಬಿದ್ದಿದ್ದನಂತೆ. ಹೀಗಾಗಿ ನನ್ನ ಪುತ್ರಿಯ ತಂಟೆಗೆ ಬರಬೇಡ ಎಂದು ಯುವಕನಿಗೆ ವಾರ್ನ್ ಮಾಡಲು ತಂದೆ ಫಕೀರಪ್ಪ ಹೋಗಿದ್ದ. ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ಹಳೇಗೋಡಿ ಮಧ್ಯೆ ವಾಗ್ವಾದ ನಡೆದಿದೆ. ಇದೇ ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.

ಇದೇ ಗಲಾಟೆಯಲ್ಲಿ ಯುವತಿ ತಂದೆ ಫಕೀರಪ್ಪ ಯಲ್ಲಪ್ಪ ಹಳೇಗೋಡಿಗೆ ಚಾಕುವಿನಿಂದ ಇರಿದಿದ್ದಾನೆ. ಯಲ್ಲಪ್ಪನನ್ನು‌ ಬಿಡಿಸಿಕೊಳ್ಳಲು ಬಂದ ಸಹೋದರ ಮಾಯಪ್ಪನಿಗೂ ಫಕೀರಪ್ಪ ಚಾಕುವಿನಿಂದ ಚುಚ್ಚಿದ್ದಾನೆ. ತೀವ್ರ ರಕ್ತಸ್ರಾವದಿಂದ ಯಲ್ಲಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಿಕಿತ್ಸೆ ‌ಫಲಿಸದೇ ಆಸ್ಪತ್ರೆಯಲ್ಲಿ ‌ಮಾಯಪ್ಪ ಮೃತಪಟ್ಟಿದ್ದಾನೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ‌ರಾಮದುರ್ಗ ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬಳಿಕ ಆರೋಪಿ ಫಕೀರಪ್ಪ ಭಾಂವಿಹಾಳ ಪರಾರಿಯಾಗಿದ್ದಾನೆ. ಎಸ್ಕೇಪ್ ಆಗಿರೋ ಫಕೀರಪ್ಪ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Related Articles

Back to top button
error: Content is protected !!