ಶಿಕ್ಷಣ
ಎಸ್ ಎಸ್ ಎಲ್ ಸಿ ಫಲಿತಾಂಶ: ವಕ್ವಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Views: 412
ಕುಂದಾಪುರ: 2023- 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢಶಾಲೆ ವಕ್ವಾಡಿ ಶೇಕಡಾ 100 ಫಲಿತಾಂಶ ದಾಖಲಾಗಿದೆ.
ಪರೀಕ್ಷೆಗೆ ಹಾಜರಾದ 5 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, 9 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುತ್ತಾರೆ.
ಶಾಲೆಯ ವಿದ್ಯಾರ್ಥಿನಿ ಸೃಷ್ಠಿ 625 ಕ್ಕೆ 605 ಅಂಕಗಳನ್ನು ಗಳಿಸಿ ವಿಶೇಷ ಸಾಧನೆ ಮಾಡಿರುತ್ತಾರೆ. ಶಾಲೆಗೆ ಉತ್ತಮ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಪೋಷಕರು, ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಶಾಲಾ ಅಭಿವೃದ್ಧಿ ಮಂಡಳಿಯ ಸದಸ್ಯರು ಅಭಿನಂದಿಸಿದ್ದಾರೆ.