ಶಂಕರನಾರಾಯಣ ಮದರ್ ತೆರೆಸಾ ಶಿಕ್ಷಣ ಸಂಸ್ಥೆ: ಎಸ್ ಎಸ್ ಎಲ್ ಸಿ ಯಲ್ಲಿ ಶೇ 100 ಫಲಿತಾಂಶದೊಂದಿಗೆ ರಾಜ್ಯಕ್ಕೆ 10ನೇ ರ್ಯಾಂಕ್

Views: 116
ಕುಂದಾಪುರ:ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ನ ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಪಡೆಯುವ ಮೂಲಕ ಮತ್ತೊಮ್ಮೆ ಸಂಸ್ಥೆಯು ಉತ್ತಮ ಫಲಿತಾಂಶದೊಂದಿಗೆ ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದಿರುತ್ತಾರೆ.

ಪ್ರಣಮಿ (615) ರಾಜ್ಯಕ್ಕೆ 10ನೇ ರ್ಯಾಂಕ್

ಮಹಿಮಾ (612) ರಾಜ್ಯಕ್ಕೆ 13ನೇ ರ್ಯಾಂಕ್
ಒಟ್ಟು 54 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. 615 ಅಂಕಗಳನ್ನು ಗಳಿಸುವ ಮೂಲಕ ಪ್ರಣಮಿ ರಾಜ್ಯಕ್ಕೆ ಹತ್ತನೇ ರ್ಯಾಂಕ್ ಮತ್ತು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ 612 ಅಂಕಗಳನ್ನು ಗಳಿಸುವ ಮೂಲಕ ಮಹಿಮ ರಾಜ್ಯಕ್ಕೆ 13ನೇ ರ್ಯಾಂಕ್ ಪಡೆದಿರುತ್ತಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.







