ಶಿಕ್ಷಣ

ವಂಡ್ಸೆ: ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ ಎಸ್ಎಸ್ಎಲ್ಸಿ ಪರೀಕ್ಷೆ ಶೇಕಡಾ 100 ಫಲಿತಾಂಶ

Views: 513

ವಂಡ್ಸೆ :ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ-ವಂಡ್ಸೆ 2023- 24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಾಗಿದೆ.

ಒಟ್ಟು 36 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, 12 ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಅಧಿಕ ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.

ಆಯುಷ್ 610( 97.67% )ಅಂಕ ಪಡೆದಿದ್ದು, ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ನಿಶ್ಚಿತ 605 (96.8) ಶೇಕಡ ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಉತ್ತಮ ಫಲಿತಾಂಶ ದಾಖಲಿಸಿದ್ದಕ್ಕೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Related Articles

Back to top button