ಇತರೆ
ಬೈಂದೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಢಿಕ್ಕಿ : ಮಹಿಳೆ ಸಾವು

Views: 119
ಬೈಂದೂರು : ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಕಿರೀಮಂಜೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಬೈಂದೂರು ಪೊಲೀಸರು, ಹೈವೆ ಪೊಲೀಸ್, ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ, ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್, ಬೈಂದೂರು ಪೊಲೀಸ್ ಅಧಿಕಾರಿ ಮಹೇಶ್ ಮೊದಲಾದವರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






