ಶಿಕ್ಷಣ
ಎಸ್‌ಎಸ್‌ಎಲ್‌ಸಿಯಲ್ಲಿ ಫೇಲ್ ಎಂದು ತಪ್ಪಾಗಿ ತಿಳಿದು ವಿದ್ಯಾರ್ಥಿನಿ ಆತ್ಮಹತ್ಯೆ

Views: 195
ಮಂಡ್ಯ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ.
ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು.
ಆದರೆ ಪರೀಕ್ಷೆಯಲ್ಲಿ ಫೇಲ್ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.