ಇತರೆ
ಬಾಡಿಗೆ ಕೇಳುವ ನೆಪದಲ್ಲಿ ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ

Views: 111
ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕು ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಯೊಬ್ಬ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಿವ್ಯಾ (32) ಕೊಲೆಯಾದ ಮಹಿಳೆ. ಮಹಿಳೆಯ ಗಂಡ ಗುರುಮೂರ್ತಿ ಕೆಲಸಕ್ಕೆಂದು ಸಲೂನ್ ಹೋಗಿದ್ದರು. ಈ ವೇಳೆ ಆರೋಪಿ, ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕದ್ದು ಪರಾರಿಯಾಗಿದ್ದಾನೆ. ಮಹಿಳೆಯ ಮೃತದೇಹವನ್ನು ಆರ್.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.






