ಇತರೆ
SSLC ವಿದ್ಯಾರ್ಥಿನಿ ಹತ್ಯೆ ಆರೋಪಿ ಸೆರೆ, ಮೀನಾಳ ರುಂಡ ಮರದಲ್ಲಿ ಪತ್ತೆ

Views: 92
ಕೊಡಗು: ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯ ಕುಂಬಾರಗಡಿಗೆಯಲ್ಲಿ ನಡೆದ ಅಪ್ರಾಪ್ತ ವಯಸ್ಸಿನ SSLCವಿದ್ಯಾರ್ಥಿನಿಯ ಹತ್ಯೆ ಪ್ರಕರಣದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.
ಆರೋಪಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಿಡಿಗೇಡಿಗಳು ತಪ್ಪು ಮಾಹಿತಿಯನ್ನು ಹಬ್ಬಿಸಿದ್ದರು.

ಬಾಲಕಿಯೊಂದಿಗೆ ವಿವಾಹ ಸಾಧ್ಯವಾಗದ ಹಿನ್ನೆಲೆ ಹತಾಶೆಯಿಂದ ಆರೋಪಿ ಪ್ರಕಾಶ್ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಜಿಲ್ಲಾ ಎಸ್‌ಪಿ ಕೆ. ರಾಮರಾಜನ್ ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಅವರು ಮಾಹಿತಿ ನೀಡಿ, ಬಂಧಿತ ಆರೋಪಿ ಪ್ರಕಾಶ್ ನನ್ನು ವಿಚಾರಣೆಗೆ ಒಳಪಡಿಸಿ, ಹತ್ಯೆಗೊಳಗಾದ ಮೀನಾಳ ರುಂಡವನ್ನು ಕುಂಬಾರಗಡಿಗೆಯ ಆಕೆಯ ಮನೆಯಿಂದ ಸುಮಾರು 50 ರಿಂದ 100 ಮೀಟರ್ ದೂರದ ಮರಕಾಡುಗಳ ನಡುವೆ ಪತ್ತೆ ಮಾಡಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಲಾದ ಕತ್ತಿ ಮತ್ತು ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.






