ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಪಟ್ಟಿ ಪ್ರಕಟ, 1 ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ,ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾನ

Views: 62
ಬೆಂಗಳೂರು: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.
ವಿಧಾನ ಪರಿಷತ್ನ 6 ಕ್ಷೇತ್ರಗಳ ಪೈಕಿ 1 ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನ ಪರಿಷತ್ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ.
ಉಳಿದ ಐದು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಪರಿಷತ್ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ಪರಿಷತ್ನ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಪರಿಷತ್ನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಪರಿಷತ್ನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಮತ್ತು ವಿಧಾನಪರಿಷತ್ನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಅವರನ್ನು ಕಣಕ್ಕಳಿಸಿದೆ.
ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ ಈ ಬಗ್ಗೆ ಪರಿಷತ್ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾನ ಹೊರಹಾಕಿದ್ದಾರೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ ಎಂದಿದ್ದಾರೆ.






