ಇತರೆ

ಬಳ್ಕೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ : ಸವಾರ ಸಾವು 

Views: 177

ಕುಂದಾಪುರ:ಬಳ್ಕೂರಿನ ಗುಲ್ವಾಡಿ ಡ್ಯಾಮ್ ಸಮೀಪ  ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ  ಮಂಗಳವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿಯನ್ನು ಬಳ್ಕೂರು ನಿವಾಸಿ ಬಸವ ಪೂಜಾರಿ (55) ಎಂದು ಗುರುತಿಸಲಾಗಿದೆ.

ಕಂಡ್ಲೂರುನಿಂದ ಬಸ್ರೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಟಿಪ್ಪರ್ ಲಾರಿ ಬಸ್ರೂರುನಿಂದ ಬಳ್ಕೂರು ಕಡೆಗೆ ಹೋಗುತ್ತಿದ್ದ ಲೂನ ವಾಹನಕ್ಕೆ ನೇರವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಂದಾಪುರ ಸಂಚಾರಿ  ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!