ಕರಾವಳಿ
ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Views: 65
ಉಡುಪಿ : ಜಿಲ್ಲೆಯಯಾದ್ಯಂತ ಶನಿವಾರ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ.
ಉಡುಪಿ, ಬ್ರಹ್ಮಾವರ, ಕುಂದಾಪುರ,ಕೋಟ, ತೆಕ್ಕಟ್ಟೆ, ಬಸ್ರೂರು, ಕಾಳಾವರ, ಹಾಲಾಡಿ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಮೇ 19ರಿಂದ 22ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ವೇಳೆ ಬಿರುಸಿನ ಮಳೆ ಗುಡುಗು ಮಿಂಚು ಬರುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಸೂಚಿಸಲಾಗಿದೆ.






