ಇತರೆ

ಹುಬ್ಬಳ್ಳಿ: ಹತ್ಯೆಯಾದ ಯುವತಿ ಅಂಜಲಿ ಸಹೋದರಿ ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನ !

Views: 65

ಹುಬ್ಬಳ್ಳಿ: ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಸಹೋದರಿ ಅಕ್ಕನ ಸಾವಿನಿಂದ ಮನನೊಂದು ತಂಗಿ  ಯಶೋದೆ ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ನಿನ್ನೆ ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ್ಮ ಸ್ವಾಮೀಜಿ, ದಿಂಗಾಲೇಶ್ವರ ಶ್ರೀ, ಮನಸೂರಿನ ಬಸವರಾಜ ದೇವರು ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಯಶೋಧ ಕೂಡ ಭಾಗಿಯಾಗಿದ್ದಳು. ಪ್ರತಿಭಟನೆ ವೇಳೆ ಯಶೋಧ ಪ್ರಜ್ಞೆ ತಪ್ಪಿ ಬಿದ್ದಿದ್ದರು.ಕೂಡಲೆ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ಮನೆಗೆ ಹೋದ ಯಶೋಧ ರಾತ್ರಿ ಪಿನಾಯಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.ಸದ್ಯ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Related Articles

Back to top button
error: Content is protected !!