ಕರಾವಳಿ
ಮಂಗಳೂರು: ಶಾಲೆ ಗೇಟ್ ಬಳಿ ಆಟ ಆಡುತ್ತಿದ್ದಾಗ ಕಾಂಪೌಂಡ್ ಕುಸಿದು ಬಾಲಕಿ ಸಾವು

Views: 60
ಮಂಗಳೂರು: ಶಾಲೆಯ ಗೇಟ್ ಮೇಲೆ ಹತ್ತಿ ಆಟವಾಡುತ್ತಿದ್ದಾಗ ಕಂಪೌಂಡ್ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ಬಳಿ ನಡೆದಿದೆ.
ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಪಟ್ಟ ಬಾಲಕಿ
ಮೃತ ಬಾಲಕಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಕಟ್ಟಿದ ನ್ಯೂಪಡ್ಪು ಶಾಲೆಯ ಕಂಪೌಂಡ್ ಮೇಲೆ ಆಟವಾಡುತ್ತಿದ್ದಳು. ಆದರೆ ಮಳೆಯಿಂದ ಶಿಥಿಲಗೊಂಡಿದ್ದ ಗೋಡೆ ಏಕಾಏಕಿ ಬಾಲಕಿಯ ಮೇಲೆ ಕುಸಿದು ಬಿದ್ದಿದೆ. ಮೃತ ಬಾಲಕಿ ಹಾಜಬ್ಬರ ಶಾಲೆಯಲ್ಲಿ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಬಾಲಕಿಯೂ ಶಾಲೆಯಲ್ಲಿ ನಡೆಯುತ್ತಿದ್ದ ಎನ್ ಎಸ್ ಎಸ್ ಶಿಬಿರದಲ್ಲಿ ಭಾಗಿಯಾಗಿದ್ದಳು. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






