ಇತರೆ

ಲಾರಿ – ಕಾರು ನಡುವೆ ಡಿಕ್ಕಿ, ನಾಲ್ವರು ಸಾವು

Views: 198

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಚಿತ್ರದುರ್ಗ ಮೂಲದವರು ಎಂದು ತಿಳಿದು ಬಂದಿದೆ.

ಕುಟುಂಬವೊಂದು ಎರಡು ಕಾರುಗಳಲ್ಲಿ ಧರ್ಮಸ್ಥಳಕ್ಕೆ ತೆರಳಿ ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಾಪಾಸ್ ಬರುತ್ತಿದ್ದಾಗ  ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ  ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!