ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಬೇಟಿ: ಜೈ ಶ್ರೀರಾಮ್ ಘೋಷಣೆ ಕೂಗಿದ ಭಕ್ತರು!

Views: 228
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು, ಮಂಜುನಾಥನ ದರ್ಶನ ಪಡೆದಿದ್ದಾರೆ.ದೇವಸ್ಥಾನ ಪ್ರವೇಶ ಮಾಡುತ್ತಿದ್ದಂತೆಯೇ ನೆರೆದಿದ್ದ ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭೇಟಿ ಕೊಟ್ಟ ಸಿಎಂ ಹಾಗೂ ಡಿಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇದ್ದರು. ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ನಾಯಕರು ಬಳಿಕ ರಸ್ತೆ ಮಾರ್ಗದ ಮೂಲಕ ಮಂಜುನಾಥನ ಸನ್ನಿಧಿಗೆ ಆಗಮಿಸಿದ್ದಾರೆ. ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ವಾದ್ಯ ಘೋಷಗಳ ಸಿಎಂ ಹಾಗೂ ಡಿಕೆಶಿಗೆ ಭವ್ಯ ಸ್ವಾಗತ ಕೋರಲಾಯಿತು.
ವೀರೇಂದ್ರ ಹೆಗ್ಗಡೆ ಸಹೋದರ ಹರ್ಷೇಂದ್ರ ಹೆಗ್ಗಡೆ ಕ್ಷೇತ್ರದ ಪರವಾಗಿ ಸ್ವಾಗತಿಸಿದರು. ಬಳಿಕ ಸಿಎಂ, ಡಿಸಿಎಂ ಹಾಗೂ ಸಚಿವರು ಮುಖ್ಯ ದ್ವಾರದಿಂದ ನಡೆದುಕೊಂಡೇ ದೇವಸ್ಥಾನ ಪ್ರವೇಶಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ದೇವಸ್ಥಾನ ಪ್ರವೇಶ ಮಾಡುತ್ತಿದ್ದಂತೆಯೇ ನೆರೆದಿದ್ದ ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಅಲ್ಲದೇ ಇದೇ ವೇಳೆ ಪ್ರಧಾನಿ ಮೋದಿಗೂ ಜೈಕಾರ ಕೂಗಿದರು.
ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಮತ್ತು ಡಿಸಿಎಂ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.






